ಬೆಂಗಳೂರು:ಶಿವಮೊಗ್ಗ ನಗರ ಮತ್ತು ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಈ ಮೂಲಕ ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಂತಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದರಿಂದ ಅವರು ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರ ತೆರವಾಗಿತ್ತು. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ, ಮಾನ್ವಿ ಕ್ಷೇತ್ರದಿಂದ ಬಿ.ವಿ.ನಾಯಕ (ಎಸ್ಟಿ) ಸ್ಪರ್ಧಿಸಲು ಅವಕಾಶ ನೀಡಲಾಗಿದೆ.
ETV Bharat / assembly-elections
ಶಿವಮೊಗ್ಗ ನಗರ, ಮಾನ್ವಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ - Former minister KS Eshwarappa
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಇಂದು ರಾತ್ರಿ ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದೆ.
![ಶಿವಮೊಗ್ಗ ನಗರ, ಮಾನ್ವಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ Karnataka assembly election](https://etvbharatimages.akamaized.net/etvbharat/prod-images/1200-675-18287774-thumbnail-16x9-kis.jpg)
ಶಿವಮೊಗ್ಗ ಹಾಗೂ ಮಾನ್ವಿ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ