ಬೆಂಗಳೂರು: ಅನೇಕ ಅಚ್ಚರಿಯ ಫಲಿತಾಂಶಕ್ಕೆ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಹಲವು ಘಟಾನುಘಟಿ ನಾಯಕರು ಈ ಬಾರಿ ಸೋಲು ಕಂಡಿದ್ದಾರೆ. ಅದರಲ್ಲಿ ಇಬ್ಬರು ಸಂಘದ ಹಿನ್ನೆಲೆಯ ಬಿಜೆಪಿ ಅಭ್ಯರ್ಥಿ ಸಿಟಿ ರವಿ ಆದರೆ, ಮತ್ತೊಬ್ಬ ಅಭ್ಯರ್ಥಿ ಡಾ ಕೆ ಸುಧಾಕರ್.
ಬಿಜೆಪಿ ಪ್ರಬಲ ನಾಯಕರಲ್ಲಿ ಒಬ್ಬರಾಗಿದ್ದ ಸಿಟಿ ರವಿ ಕಾಂಗ್ರೆಸ್ ಅಭ್ಯರ್ಥಿ ಎಚ್ ಡಿ ತಿಮ್ಮಯ್ಯ ವಿರುದ್ಧ ಪರಭಾವಗೊಂಡಿದ್ದಾರೆ. ಕಳೆದ ನಾಲ್ಕು ಚುನಾವಣೆಯಲ್ಲಿ ಸತತ ಗೆಲುವು ದಾಖಲಿಸಿದ್ದ ಸಿಟಿ ರವಿ 9 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ಇನ್ನು ಈ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಸಿಟಿ ರವಿ, ಇದು ವೈಯಕ್ತಿಕ ಸೋಲಾಗಿದ್ದು, ತತ್ವ ಸಿದ್ದಾಂತದ ಸೋಲು ಅಲ್ಲ. ಮುಂದಿನ ದಿನಗಳಲ್ಲಿ ಈ ಸೋಲಿನ ಕುರಿತು ಅವಲೋಕಿಸಿ, ಸರಿ ಪಡಿಸಿಕೊಳ್ಳಲಾಗುವುದು. ಸುವರ್ಣ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಪ್ರಯತ್ನ ಮುಂದುವರೆಯಲಿದೆ. ನಮಗೆ ಬೆಂಬಲ ನೀಡಿದ ಕನ್ನಡಿಗರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಅವರು, ನನ್ನ ಸೋಲನ್ನು ಸ್ವೀಕರಿಸುತ್ತೇನೆ. ನನಗೆ ಇಷ್ಟು ವರ್ಷ ಬೆಂಬಲ ನೀಡಿದ ಚಿಕ್ಕಮಗಳೂರು ಜನತೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳು. ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ಅಭಿನಂದನೆಗಳು ಎಂದಿದ್ದಾರೆ.
ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರಿನಲ್ಲಿ 2004, 2008, 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಸಿಟಿ ರವಿ ಭರ್ಜರಿ ಗೆಲುವು ದಾಖಲಿಸಿದ್ದರು. ಕಡು ಹಿಂದುತ್ವವಾದಿಯಾಗಿ ಗುರುತಿಸಿಕೊಂಡಿದ್ದ ಅವರು, ಚಿಕ್ಕಮಗಳೂರು ದತ್ತಾಮಾಲೆ ಯಾತ್ರೆಗೆ ಒತ್ತು ನೀಡಿದ್ದರು. ಆರ್ಎಸ್ಎಸ್ ಹಿನ್ನೆಲೆ ಹೊಂದಿರುವ ಅವರು ಸಿದ್ದರಾಮಯ್ಯ ಅವರ ವಿರುದ್ಧ ಕಟು ಟೀಕೆ ಮಾಡಿ ಸಿದ್ರಾಮುಲ್ಲಾ ಎಂದು ಕರೆದಿದ್ದರು.
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನಿರ್ವಹಣೆ ಮಾಡಿದ ಸಿಟಿ ರವಿ, ನೆರೆಯ ತಮಿಳುನಾಡು ಮತ್ತು ಗೋವಾ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ರಾಜ್ಯದಲ್ಲಿ ಹಿಜಾಬ್ ವಿರುದ್ಧ ಭಾರಿ ಟೀಕೆ ವ್ಯಕ್ತಪಡಿಸಿದ್ದು, ಅಲ್ಲದೇ, ಕಾಂಗ್ರೆಸ್ ಟಿಪ್ಪು ವಿಚಾರದಲ್ಲಿ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೂತ್ವದ ಆಕ್ರಮಣಕಾರಿ ವ್ಯಕ್ತಿತ್ವದ ಭಾಷಣಗಳ ಮೂಲಕ
ಸೋಲು ಸ್ವೀಕಾರ:ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಭಾರೀ ಪ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕೂಡ ತಮ್ಮ ಸೋಲು ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಅವರು, ಕಳೆದ 10 ವರ್ಷಗಳಿಂದ ಎಲ್ಲ ರೀತಿಯ ಬೆಂಬಲ, ಸಹಕಾರ ನೀಡಿ ಆಶೀರ್ವದಿಸಿದ್ದಾರೆ. ಕೋವಿಡ್ ಕಾಲದಲ್ಲಿ ಕಳೆದ 3-4 ವರ್ಷಗಳಿಂದ ಕುಟುಂಬಕ್ಕೆ ಸಮಯ ನೀಡದೇ ಕಾರ್ಯ ನಿರ್ವಹಿಸಿದ್ದೇನೆ. ಇದೀಗ ಸ್ವಲ್ಪ ದಿನಗಳ ಕಾಲ ಕುಟುಂಬ ಮತ್ತು ಮಕ್ಕಳೊಂದಿಗೆ ಸಮಯ ಕಳೆದು ಬಳಿಕ ಚಿಕ್ಕಬಳ್ಳಾಪುರ ಸೇವೆಗೆ ಮರಳುತ್ತೇನೆ. ಮತ್ತೆ ಸೇವೆ ಮುಂದುವರಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಬೊಮ್ಮಾಯಿ ಸಂಪುಟದ 12 ಸಚಿವರಿಗೆ ಸೋಲು!