ಬಾಗಲಕೋಟೆ: ಬಾದಾಮಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧೆಯಿಂದ ದೂರು ಸರಿದ ಹಿನ್ನೆಲೆ, ಈ ಭಾರಿ ಕ್ಷೇತ್ರವು ರಾಜ್ಯ ಮಟ್ಟದಲ್ಲಿ ಗಮನ ಸೆಳೆಯದೇ ಕೇವಲ ಸ್ಥಳೀಯ ಮಟ್ಟದಲ್ಲಿ ಮಾತ್ರ ಗಮನ ಸೆಳೆಯುವಂತಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಪ್ರಮುಖ ಪೈಪೋಟಿಯಲ್ಲಿ ಇದ್ದರೂ ತೆರೆ ಮೆರೆಯಲ್ಲಿ ಪಕ್ಷೇತರ ಅಭ್ಯರ್ಥಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.
ಭೀಮಪ್ಪ ತಳವಾರ ಎಂಬುವವರು ನಿವೃತ್ತ ತಹಶಿಲ್ದಾರ ಪಕ್ಷೇತರ ಅಭ್ಯರ್ಥಿಯಾಗಿ ಬಾದಾಮಿ ಮತಕ್ಷೇತ್ರದಲ್ಲಿ ಕಣಕ್ಕೆ ಇಳಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಮೈಸೂರು ಭಾಗದಲ್ಲಿ ಹೆಚ್ಚು ಕೆಲಸ ಮಾಡಿ ಗಮನ ಸೆಳೆದಿರುವ ಭೀಮಪ್ಪ ತಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಜೆ ಟಿ ದೇವೆಗೌಡ ಸೇರಿದಂತೆ ಇತರರು ಪ್ರಮುಖ ರಾಜಕೀಯ ವ್ಯಕ್ತಿಗಳು ಅಧಿಕಾರದಲ್ಲಿ ಇದ್ದಾಗ ಅವರ ಜೊತೆಗೆ ತಹಶೀಲ್ದಾರರಾಗಿ ಕೆಲಸ ಮಾಡಿಕೊಂಡು ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದರು.
ಮೂಲತಃ ಭೀಮಪ್ಪ ತಳವಾರ ಅವರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕರಡಿಗುಡ್ಡ ಗ್ರಾಮದವರು. ಅಧಿಕಾರಿಯಾಗಿ ಮೈಸೂರು ಭಾಗದಲ್ಲಿ ಕೆಲಸ ಮುಗಿಸಿ, ಈಗ ನಿವೃತ್ತರಾಗಿದ್ದಾರೆ. ಬಾದಾಮಿಗೆ ಹೆಚ್ಚು ಸಂಕರ್ಪ ಹೊಂದಿರುವುದರಿಂದ 2018 ರಿಂದಲೂ ಬಾದಾಮಿ ಹಾಗೂ ಬಾಗಲಕೋಟೆ ತಾಲೂಕಿನಲ್ಲಿ ಹಲವಾರು ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದಾರೆ.
ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಘಟಕ ಉಪ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದ ಭೀಮಪ್ಪ ತಳವಾರ ಪಕ್ಷದ ಕಾರ್ಯ ವೈಖ್ಯರಿಗೆ ಬೇಸತ್ತು ರಾಜೀನಾಮೆ ನೀಡಿದ್ದಾರೆ. 2018 ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಂದಾಗಿದ್ದರು. ಆದರೆ, ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೌನ ವಹಿಸಿದ್ದರು. ಆಗಿನಿಂದಲೂ ತೆರೆಯ ಮೆರೆಯಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಭಾರಿ ಪಕ್ಷೇತರವಾಗಿ ಕಣಕ್ಕೆ ಇಳಿಯಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಳಗೇರಿ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜನೆ ಮಾಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದಿದ್ದಾರೆ.