ಕರ್ನಾಟಕ

karnataka

ETV Bharat / assembly-elections

ಚಿಕ್ಕಪೇಟೆ ಕ್ಷೇತ್ರ ಆಪ್​ ತೆಕ್ಕೆಗೆ ಬರುವುದರಲ್ಲಿ ಸಂಶಯವೇ ಇಲ್ಲ: ಬ್ರಿಜೇಶ್ ಕಾಳಪ್ಪ

''ಚಿಕ್ಕಪೇಟೆ ಕ್ಷೇತ್ರ ಆಮ್ ಆದ್ಮಿ ಪಕ್ಷದ ತೆಕ್ಕೆಗೆ ಬರುವುದರಲ್ಲಿ ಸಂಶಯವೇ ಇಲ್ಲ'' ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಕಾಳಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Brijesh Kalappa
ಬ್ರಿಜೇಶ್ ಕಾಳಪ್ಪ

By

Published : Apr 15, 2023, 6:06 AM IST

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಕಾಳಪ್ಪ ಮಾತನಾಡಿದರು

ಬೆಂಗಳೂರು:ಆಮ್ ಆದ್ಮಿ ಪಕ್ಷದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಬ್ರಿಜೇಶ್ ಕಾಳಪ್ಪ ಇಂದು ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆಸಿದರು. ಬೆಂಗಳೂರಿನ ಸಜ್ಜನ್ ರಾವ್ ವೃತ್ತದಲ್ಲಿ ಪಕ್ಷದ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ, ಬ್ರಿಜೇಶ್ ಕಾಳಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:ಸವದಿ ದುಡುಕಿದ್ರಾ ಎಂಬ ಮನೋಭಾವನೆ ಕಾಡುತ್ತಿದೆ: ಸಚಿವೆ ಶಶಿಕಲಾ ಜೊಲ್ಲೆ

''ಕಳೆದ ಎರಡು ದಿನಗಳಿಂದ ಬಿಜೆಪಿ ಪಕ್ಷದಿಂದ ಉದಯ್ ಗರುಡಾಚಾರ್ ಮತ್ತು ಕಾಂಗ್ರೆಸ್ ಪಕ್ಷದಿಂದ ಎರಡು ಅಭ್ಯರ್ಥಿಗಳು ಕಣಕ್ಕೆ ಇಳಿಸಿದ್ದಾರೆ. ಮೊದಲು ವಿಶ್ಲೇಷಕರು ಅಮ್ ಆದ್ಮಿ ಪಕ್ಷಕ್ಕೆ 20 ಸಾವಿರದಿಂದ 25 ಸಾವಿರ ಮತಗಳು ಬೀಳಬಹುದು ಎಂದು ಹೇಳುತ್ತಿದ್ದರು. ಆದರೆ, ಈಗ ಕಳೆದ ಎರಡ್ಮೂರು ದಿನಗಳಿಂದ ಖುದ್ದು ವಿಶ್ಲೇಷಕರೇ 35 ಸಾವಿರದಿಂದ 40 ಸಾವಿರ ಬರುತ್ತವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಭಾವ ಬೀರಲಿದ್ದು, ಚಿಕ್ಕಪೇಟೆ ಕ್ಷೇತ್ರದಲ್ಲಿ ಅಮ್ ಆದ್ಮಿ ಪಾರ್ಟಿ ಜಯಗಳಿಸಲಿದೆ'' ಎಂದು ತಿಳಿಸಿದರು.
ಇದನ್ನೂ ಓದಿ:ಗುರುಮಠಕಲ್ ಬಿಜೆಪಿ ಅಭ್ಯರ್ಥಿ ಲಲಿತಾ ಅನಪೂರ ಟೆಂಪಲ್ ರನ್‌
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಚಾರ ತಾಂಡವ - ಆರೋಪ:''ಇಂದು ನಡೆದ ಬೈಕ್ ರ‍್ಯಾಲಿಯಲ್ಲೂ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಬಂದಿದೆ. ಜನರು ಸ್ವತಃ ಅವರೇ ಬಂದು ನಮಗೆ ಬದಲಾವಣೆ ಬೇಕಾಗಿದೆ ಎಂದು ಹೇಳುತ್ತಿದ್ದಾರೆ. ಏಕೆಂದರೆ ಈ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಚಾರ ತಾಂಡವವಾಡುತ್ತಾ ಇದೆ. ಯಾವುದೇ ಕಾಮಗಾರಿಗೆ ಹಣ ಬಿಡುಗಡೆ ಆಗಬೇಕು ಎಂದರೆ ಕಾಂಗ್ರೆಸ್ ಪಕ್ಷದವರು 5 ಲಕ್ಷ ಕೇಳುತ್ತಿದ್ದರು. ಈಗ ಬಿಜೆಪಿ ಸರ್ಕಾರ 25 ಲಕ್ಷ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಕ್ಷೇತ್ರದಲ್ಲಿ ಕುಡಿಯೋ ನೀರು ಕಲುಷಿತವಾಗುತ್ತಿದೆ. ಬೆಂಗಳೂರಿನ ಹೃದಯ ಭಾಗ ಅಂತ ಹೇಳ್ತಾರೆ. ಆದರೆ, ಇಲ್ಲಿ ನೋಡಿದರೆ ಒಂದು ಅಭಿವೃದ್ಧಿಯ ಕೆಲಸಗಳು ಆಗಿಲ್ಲ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಇಲ್ಲಿಯ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ನಮ್ಮ ಪಕ್ಷವನ್ನು ಗೆಲ್ಲಿಸುತ್ತಾರೆ'' ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.

ಇದನ್ನೂ ಓದಿ:ಲಕ್ಷ್ಮಣ ಸವದಿ ಪಕ್ಷದ್ರೋಹಿ: ಎಂ.ಪಿ.ರೇಣುಕಾಚಾರ್ಯ

ಇದನ್ನೂ ಓದಿ:ಬಿದ್ದವರಿಗೆ ಡಿಸಿಎಂ ಹುದ್ದೆ ನೀಡಿದ್ರು, ಆದರೂ ಬಿಜೆಪಿಗೆ ನಿಷ್ಠೆ ತೋರಲಿಲ್ಲ: ರಮೇಶ್ ಜಾರಕಿಹೊಳಿ

ABOUT THE AUTHOR

...view details