ತೆಲಂಗಾಣ:ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಕ್ಕೆ ಸೋಲಾಗಿದೆ. ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮತ್ತೊಂದೆಡೆ, ಮೂರನೇ ಬಾರಿಗೆ ಅಧಿಕಾರ ಹಿಡಿಯುವ ತವಕದಲ್ಲಿದ್ದ ಬಿಆರ್‌ಎಸ್ ಪಕ್ಷಕ್ಕೆ ಚುನಾವಣೆಯ ಸೋಲು ನಿರಾಶೆ ಮೂಡಿಸಿದೆ.
ಬಿಆರ್‌ಎಸ್ ಪತನದ ನಂತರ ಕೆಸಿಆರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ರಾಜ್ಯಪಾಲರಿಗೆ ಸಲ್ಲಿಕೆ ಮಾಡಿದ್ದಾರೆ. ಚುನಾವಣಾ ಫಲಿತಾಂಶಕ್ಕೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಹಲವು ಗಣ್ಯರು ಪ್ರತಿಕ್ರಿಯಿಸಿದ್ದಾರೆ.
ಪ್ರಕಾಶ್ ರಾಜ್ 'ಎಕ್ಸ್' ಪೋಸ್ಟ್ ಹೀಗಿದೆ: 'ಜನರ ನಿರ್ಧಾರವನ್ನು ಗೌರವಿಸುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಕೆಸಿಆರ್ ಅವರಿಗೆ ಧನ್ಯವಾದಗಳು. ನಾವು ನಿಮ್ಮೊಂದಿಗಿದ್ದೇವೆ. ನಿಮ್ಮ ಹೃದಯ ಸದಾ ತೆಲಂಗಾಣಕ್ಕಾಗಿ ಮಿಡಿಯುತ್ತಿದೆ ಎಂಬುದು ನಮಗೆ ಗೊತ್ತಿದೆ. ಇಂಥ ಸಂದರ್ಭವೂ ದೂರವಾಗಲಿ. ಆದರೂ ಇದು ನೋವುಂಟು ಮಾಡುತ್ತಿದೆ ಎಂಬುದು ನನಗೆ ಗೊತ್ತಿದೆ'. (ಟ್ರೋಲಿಗರಿಗೆ ಸ್ವಾಗತ)