ಮುಂಬೈ: ಮಹಾರಾಷ್ಟ್ರದ ಬೋಯಿಸಾರ್ನ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೋಯಿಸಾರ್ನ ಕಾರ್ಖಾನೆಯಲ್ಲಿ ಭಾರಿ ಸ್ಫೋಟ.. ಓರ್ವ ಸಾವು, ಐವರ ಸ್ಥಿತಿ ಗಂಭೀರ - ಬೋಯಿಸಾರ್ ಕೈಗಾರಿಕಾ ಪ್ರದೇಶ
ಬೋಯಿಸಾರ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಭಾರಿ ಸ್ಫೋಟ
ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ಇಂದು ಬೆಳಗ್ಗೆ 6 ಗಂಟೆಗೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹತೋಟಿಗೆ ತಂದಿದ್ದಾರೆ. ಅವಘಡಕ್ಕೆ ಕಾರಣ ಏನೆಂಬುದು ಈವರೆಗೆ ತಿಳಿದುಬಂದಿಲ್ಲ.
Last Updated : Sep 4, 2021, 2:11 PM IST