ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ 17 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಜತೆಗೆ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಜಿಲ್ಲೆಯ ಹಂದ್ವಾರ ಪ್ರದೇಶದ ತಾರತ್ಪೋರಾದಲ್ಲಿರುವ ಗುಲಾಂ ಅಹ್ಮದ್ ವಾನಿ ಅವರ ಮನೆಯಲ್ಲಿ ರಾತ್ರಿ 8.45 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಶಬ್ನಮ್ ವಾನಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ.