ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,32,788 ಕೇಸುಗಳು ದಾಖಲಾಗಿವೆ. ಇನ್ನು 3,207 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,35,102ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,93,645ರಷ್ಟಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 2,31,456 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,61,79,085ಕ್ಕೆ ತಲುಪಿದೆ.