ಕೋಹಿಮಾ(ನಾಗಾಲ್ಯಾಂಡ್):ಭದ್ರತಾ ಪಡೆಗಳು 13 ಮಂದಿ ನಾಗರಿಕರನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಓಟಿಂಗ್ ಮತ್ತು ತಿರು ಗ್ರಾಮಗಳ ನಡುವೆ ನಡೆದಿದೆ.
ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಸಂಘಟನೆಯ ಬಂಡುಕೋರರು ಎಂದು ಭಾವಿಸಿ, ಭದ್ರತಾ ಪಡೆಗಳು ದಾಳಿ ನಡೆಸಿವೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಈ ವೇಳೆ, ಓರ್ವ ಯೋಧ ಕೂಡಾ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಹಲವೆಡೆ ಪರಿಸ್ಥಿತಿ ಉದ್ವಿಗ್ನವಾಗಿದೆ.