ತಿರುಪತಿ:ಇಲ್ಲಿನ ರುವಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ 11 ಕೋವಿಡ್-19 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆಸ್ಪತ್ರೆಯಲ್ಲಿ ಆಮ್ಲಜನಕದ ಸಿಲಿಂಡರ್ ಖಾಲಿ ಆಗಿದ್ದರಿಂದ ಸರಬರಾಜಿನಲ್ಲಿ ಅಡ್ಡಿ ಉಂಟಾಯಿತು. ರಾತ್ರಿ 8.30ಕ್ಕೆ ಆಮ್ಲಜನಕ ಸಂಪೂರ್ಣವಾಗಿ ಖಾಲಿಯಾಗಿದ್ದರ ತತ್ಪರಿಣಾಮವಾಗಿ ರೋಗಿಗಳಿಗೆ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗಲಿಲ್ಲ.
ರುವಾ ಆಸ್ಪತ್ರೆಯಲ್ಲಿ ಸುಮಾರು 1,000 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 700 ಹಾಸಿಗೆಗಳಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಐಸಿಯುನಲ್ಲಿ ಸುಮಾರು 130 ಜನರಿದ್ದಾರೆ. ಆಮ್ಲಜನಕದ ಪೂರೈಕೆ ಕಡಿಮೆಯಾದ ಕೂಡಲೇ ರೋಗಿಗಳು ತೀವ್ರ ತೊಂದರೆಗೀಡಾದರು. ತುರ್ತು ಉಸಿರಾಟವನ್ನು ಒದಗಿಸಲು ವೈದ್ಯರು ಸಿಪಿಆರ್ ನಂತಹ ಕ್ರಮಗಳನ್ನು ಪ್ರಾರಂಭಿಸಿದರು. ತಮಿಳುನಾಡಿನ ಶ್ರೀಪೆರುಂಬುದೂರ್ ಆಕ್ಸಿಜನ್ ಪ್ಲಾಂಟ್‌ನಿಂದ ರುಯಿಯಾಗೆ ಆಮ್ಲಜನಕ ಸರಬರಾಜು ಮಾಡಲಾಗುತ್ತಿದೆ. ಆದರೂ ಸರಬರಾಜಿನಲ್ಲಿ ವಿಳಂಬ ಆಗಿದ್ದು ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಸಾರಿಗೆ ಸಂಚಾರದ ವಿಳಂಬ