ಕರ್ನಾಟಕ

karnataka

ETV Bharat / bharat

ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ! - 11-year-old girl sexually assaulted in the toilet of a girls' high school in Pune

ಬುಧವಾರ ಶಾಲೆಗೆ ಬಂದಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಯೊಂದಿಗೆ ಪರಿಚಿತನಂತೆ ನಟಿಸಿ, ಆಕೆಯನ್ನು ಬಲವಂತವಾಗಿ ಶಾಲೆಯ ಶೌಚ ಗೃಹಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಶಾಲೆಯ ಶೌಚಾಲಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ
ಶಾಲೆಯ ಶೌಚಾಲಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ

By

Published : Mar 24, 2022, 3:16 PM IST

ಪುಣೆ(ಮಹಾರಾಷ್ಟ್ರ): ಶಿವಾಜಿನಗರ ಪ್ರದೇಶದ ಬಾಲಕಿಯರ ಪ್ರೌಢಶಾಲೆಯೊಂದರಲ್ಲಿ 11 ವರ್ಷದ ವಿದ್ಯಾರ್ಥಿನಿ ಮೇಲೆ ಅಪರಿಚಿತ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಪ್ರಕಾರ, ಬಾಲಕಿ ಪ್ರಸಿದ್ಧ ಜಂಗಲಿ ಮಹಾರಾಜ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಓದುತ್ತಿದ್ದಳು. ನಿನ್ನೆ ಎಂದಿನಂತೆ ಶಾಲೆಗೆ ಬಂದಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಯೊಂದಿಗೆ ಪರಿಚಿತನಂತೆ ನಟಿಸಿ, ಆಕೆಯನ್ನು ಬಲವಂತವಾಗಿ ಶಾಲೆಯ ಶೌಚ ಗೃಹಕ್ಕೆ ಕರೆದೊಯ್ದಿದ್ದಾನೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಅಪರಾಧದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗ್ತಿದೆ.

ಇದನ್ನೂ ಓದಿ: ಶಿವಮೊಗ್ಗ: ಅಡುಗೆ ಮನೆಯಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಬಾಲಕಿ ಶಾಲೆ ಮುಗಿಸಿ ಮನೆಗೆ ತೆರಳಿ, ಶಾಲೆಯಲ್ಲಿ ನಡೆದ ಘಟನೆಯನ್ನು ತನ್ನ ತಾಯಿಗೆ ತಿಳಿಸಿದ್ದಾಳೆ. ಪರಿಣಾಮ ಸಂತ್ರಸ್ತೆಯ ತಾಯಿ ಕೂಡಲೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ಸಂಬಂಧ ಶಿವಾಜಿನಗರ ಪೊಲೀಸರು ಅತ್ಯಾಚಾರ ಪ್ರಕರಣ(ಪೋಕ್ಸೋ ಕೇಸ್​) ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details