ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾಸಭೆಯ ಮಳೆಗಾಲದ ಅಧಿವೇಶನ ಆರಂಭಗೊಂಡಿದೆ. ಈ ವೇಳೆ ಸಭಾಧ್ಯಕ್ಷರ ಜೊತೆ ಅನುಚಿತವಾಗಿ ವರ್ತನೆ ತೋರಿರುವ ಆರೋಪದ ಮೇಲೆ 12 ಬಿಜೆಪಿ ಶಾಸಕರನ್ನು 1 ವರ್ಷಗಳ ಕಾಲ ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ.
ಹಿಂದುಳಿದ ವರ್ಗಗಳ ಮಸೂದೆ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ದುರ್ವರ್ತನೆ ತೋರಿದ್ದಾರೆಂದು ಹೇಳಲಾಗಿದೆ. ಚರ್ಚೆ ನಡೆಯುತ್ತಿದ್ದ ವೇಳೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಢ್ನವೀಸ್ ಕೂಡ ಉಪಸ್ಥಿತರಿದ್ದರು. ಸ್ಪೀಕರ್ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಬಾಸ್ಕರ್ ಜಾಧವ್ ಈ ನಿರ್ಧಾರ ಕೈಗೊಂಡಿದ್ದಾರೆಂದು ವರದಿಯಾಗಿದೆ.
ಬಿಜೆಪಿಯ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಖಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜೇ ಕುಮಾರ್ ರಾವತ್, ನಾರಾಯಣ್ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ ಅಮಾನತುಗೊಂಡ ಶಾಸಕರು.