ಮುಂಬೈ (ಮಹಾರಾಷ್ಟ್ರ): ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಹಠದಲ್ಲಿ ಪಕ್ಷಗಳು ನಾನಾ ಕಸರತ್ತುಗಳನ್ನು ನಡೆಸುತ್ತಿವೆ. ಆದರೆ, ಚುನಾವಣೆ ನಡೆಯದಿರುವ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಾಯಕನೊಬ್ಬ ಹೈಕಮಾಂಡ್ಗೆ ಪತ್ರ ಬರೆದು, ಕೆಲವೊಂದು ಅಸಮಾಧಾನಗಳನ್ನು ಹೊರಹಾಕಿದ್ದಾನೆ.
ಎಐಸಿಸಿ ಸದಸ್ಯ ವಿಶ್ವಬಂಧು ರೈ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ನಡೆಸುತ್ತಿರುವ ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡಾ ಒಂದು ಭಾಗವಾಗಿದೆ. ಮಹಾರಾಷ್ಟ್ರದಲ್ಲಿ 12 ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಚಿವರಿದ್ದಾರೆ. ಆದರೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಪ್ರಣಾಳಿಕೆ ಅಂಶಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉಲ್ಲೇಖಿಸಿದ್ದಾರೆ.
2019ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂಬೈ ನಿವಾಸಿಗಳಿಗೆ ಎಸ್‌ಆರ್‌ಎ ಯೋಜನೆಯಡಿ 500 ಚದರ ಅಡಿ ಮನೆಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಈ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಸಚಿವರು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
ಆದರೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನಲ್ಲಿ 500 ಚದರ ಅಡಿವರೆಗಿನ ಮನೆಗಳ ಮೇಲಿನ ತೆರಿಗೆ ಮನ್ನಾ ಮಾಡಿ, ಎಲ್ಲ ಕ್ರೆಡಿಟ್ ಅನ್ನು ಅವರೇ ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಿಶ್ವಬಂಧು ರೈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.