ಕಾನ್ಪುರ್(ಉತ್ತರ ಪ್ರದೇಶ):ದುಷ್ಕರ್ಮಿಗಳು12 ವರ್ಷದ ಬಾಲಕಿಯೋರ್ವಳನ್ನು ಅಪಹರಣ ಮಾಡಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಇಂಥದ್ದೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಬಾಲಕಿಯ ಮೃತದೇಹ ಆಕೆಯ ಮನೆಯಿಂದ 200 ಮೀಟರ್ ದೂರದಲ್ಲಿರುವ ತೋಟದಲ್ಲಿ ದೊರೆತಿದೆ.
ಮನೆ ಸಮೀಪದ ತೋಟದಲ್ಲಿ ಪತ್ತೆಯಾದ ಬಾಲಕಿಯ ಶವ ಪರಿಶೀಲನೆ ಮೃತದೇಹದ ಮೇಲೆ ಬಟ್ಟೆಗಳಿರದ ಕಾರಣ ಕುಟುಂಬಸ್ಥರು ಅತ್ಯಾಚಾರದ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳಪುರ್ ಠಾಣಾ ಕ್ಷೇತ್ರದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಬಾಲಕಿ ಮನೆಯ ಮುಂದೆ ಮಲಗಿಕೊಂಡಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು. ಬೆಳಿಗ್ಗೆ ಶೋಧ ಕಾರ್ಯ ನಡೆಸಿದಾಗ ಶವವಾಗಿ ಪತ್ತೆಯಾಗಿದ್ದಾಳೆ.
ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಗ್ರಾಮದ ಜನರನ್ನು ಪ್ರಶ್ನೆ ಮಾಡಲಾಗ್ತಿದ್ದು, ಸದ್ಯ ಯಾವುದೇ ಸುಳಿವು ಸಿಕ್ಕಿಲ್ಲ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಬಗ್ಗೆ ವರದಿ ಬಂದ ಬಳಿಕ ಆಕೆಯ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿರಿ: Doctors Day: ವೈದ್ಯರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದ ನಮೋ