ಕೋಯಿಕ್ಕೋಡ್(ಕೇರಳ) :ಜಿಲ್ಲೆಯ ಕುನ್ನಮಂಗಲಂನಲ್ಲಿ 12 ವರ್ಷದ ಬಾಲಕಿಗೆ ತಂದೆಯೇ ಅಶ್ಲೀಲ ವಿಡಿಯೋ(Porn Video)ಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಪೊಲೀಸರು ಕ್ರಮಕೈಗೊಳ್ಳಲು ಹಿಂದೇಟು ಹಾಕಿದ್ದರಿಂದ ಅವನು ವಿದೇಶಕ್ಕೆ ಹಾರಿದ್ದಾನೆ ಎಂಬ ಮಾತು ಕೇಳಿ ಬಂದಿವೆ.
ದೂರುದಾರರ ಪ್ರಕಾರ, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಮನೆಗೆ ಬಂದಾಗ ಮಗಳಿಗೆ ಪೋರ್ನ್ ವಿಡಿಯೋಗಳನ್ನು ತೋರಿಸಿದ್ದಾರೆ. ಬಳಿಕ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಗಳು ಆಕ್ಷೇಪ ವ್ಯಕ್ತಪಡಿಸಿದಾಗ ತಾಯಿ ಮತ್ತು ತಂಗಿಯನ್ನು ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.