ಇಂದೋರ್: PUBG ಗೇಮ್ ಆಡುವ ದುರಾಸೆಯಲ್ಲಿ ಚಿಕ್ಕ ಮಕ್ಕಳು ಸೇರಿದಂತೆ ಯುವಕರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಕಣ್ಮುಂದೆ ಬರುತ್ತಲೇ ಇವೆ. ಆದರೂ ಸಹ ಇಂತಹ ಪ್ರಕರಣಗಳು ತಡೆಯಲು ಪೊಲೀಸರು ಎಷ್ಟೇ ಪ್ರಯತ್ನ ನಡೆಸಿದ್ರೂ ಪ್ರಯೋಜನೆ ಆಗುತ್ತಿಲ್ಲ. ಏಕೆಂದರೆ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಕೋಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ವಲ್ಲಭನಗರದಲ್ಲಿ ನಡೆದಿದೆ.
ಪ್ರಕರಣದ ತನಿಖಾಧಿಕಾರಿ ಹೇಳಿಕೆ ಪಬ್‌ಜಿ ಚಟ:ಈ ಬಾಲಕ PUBG ಗೇಮ್‌ಗೆ ಅಡಿಕ್ಟ್ ಆಗಿದ್ದ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕನ ಮೃತದೇಹ ಮರಣೋತ್ತರ ಪರೀಕೆಗೆ ರವಾನಿಸಿದ್ದಾರೆ. ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಓದಿ:ಅನ್ನ ನೀಡುವ ರೈತರಿಗೆ ಕಿರುಕುಳ ನಿಲ್ಲಿಸಿ ಭತ್ತ ಖರೀದಿಸಿ: ತೆಲುಗಿನಲ್ಲೇ ರಾಹುಲ್ ಗಾಂಧಿ ಟ್ವೀಟ್
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ: ತುಕೋಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ವಲ್ಲಭ ನಗರದಲ್ಲಿ ವಾಸಿಸುತ್ತಿದ್ದ 18 ವರ್ಷದ ವಿವೇಕ್ 12 ನೇ ತರಗತಿಯ ವಿದ್ಯಾರ್ಥಿ. ಕುಟುಂಬ ಸದಸ್ಯರ ಅನುಪಸ್ಥಿತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಮನೆಗೆ ಬಂದು ನೋಡಿದಾಗ ಬೆತ್ತಲೆ ಆಕಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದೆ. ಈ ಕುರಿತು ಕುಟುಂಬಸ್ಥರು ತುಕೋಗಂಜ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ಮೊಬೈಲ್ ವಶ:ವಿವೇಕ್ಗೆ PUBG ಗೇಮ್ ಆಡುವ ಚಟ ಇತ್ತು. ಹಲವು ಬಾರಿ ಪಬ್‌ಜಿ ಆಟ ಆಡುವುದನ್ನು ನಿಷೇಧಿಸಲಾಗಿತ್ತು. ಅವನು ಯಾರ ಮಾತನ್ನೂ ಕೇಳಲಿಲ್ಲ. ಬಹುಶಃ ಈ ಆಟದಿಂದಾಗಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ಮೊಬೈಲ್ ಕೂಡ ಜಪ್ತಿ ಮಾಡಲಾಗಿದ್ದು, ತನಿಖೆ ಕೈಗೊಂಡಿದ್ದಾರೆ. ಇಂದೋರ್‌ನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ.