ಕರ್ನಾಟಕ

karnataka

ETV Bharat / bharat

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 16 ಮಂದಿ ದುರ್ಮರಣ - ಗುಜರಾತ್‌ನ ಭರೂಚ್‌ ಜಿಲ್ಲೆ

14 died as fire breaks out at a covid hospital in Bharuch
ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

By

Published : May 1, 2021, 6:14 AM IST

Updated : May 1, 2021, 1:58 PM IST

06:08 May 01

ಗುಜರಾತ್‌ನ ಭರೂಚ್‌ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 16 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ

ಭರೂಚ್‌ (ಗುಜರಾತ್‌): ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 14 ರೋಗಿಗಳು ಸೇರಿ 16 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ನಡೆದಿದೆ.

ಭರೂಚ್‌ನ ಪಟೇಲ್ ವೆಲ್ಫೇರ್​ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.  

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಶಿಫ್ಟ್​ ಮಾಡಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್​ನಿಂದ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.  

Last Updated : May 1, 2021, 1:58 PM IST

ABOUT THE AUTHOR

...view details