ಸಂಬಲ್‌ಪುರ(ಒಡಿಶಾ): ಜಿಲ್ಲೆಯಲ್ಲಿ ಒಡಿಶಾ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಸಂಬಲ್‌ಪುರ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಜಿಲ್ಲಾ ನ್ಯಾಯಾಧೀಶರ ಕೊಠಡಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 14 ವಕೀಲರನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿದೆ.
ಇದುವರೆಗೆ ಜಿಲ್ಲಾ ನ್ಯಾಯಾಧೀಶರ ಕೊಠಡಿಯಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಹಲವರನ್ನು ಬಂಧಿಸಿದ್ದೇವೆ. ಅವರಲ್ಲಿ ಒಂಬತ್ತು ಮಂದಿಯನ್ನು ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲಾಗುವುದು ಸಂಬಲ್‌ಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.