ಜೋಧ್ಪುರ (ರಾಜಸ್ಥಾನ):ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘಾವಧಿ ರಜೆಯ ಬಳಿಕ ದೇಶದೆಲ್ಲೆಡೆ ಶೈಕ್ಷಣಿಕ ಸಂಸ್ಥೆಗಳು ತೆರೆದಿದ್ದವು. ಆದರೆ ಈಗ ಮತ್ತೆ ಕೆಲ ರಾಜ್ಯಗಳಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಶಿಕ್ಷಕರು ಸೋಂಕಿಗೆ ಒಳಗಾಗುತ್ತಿದ್ದಾರೆ.
ರಾಜಸ್ಥಾನದ ಜೋಧ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯಲ್ಲಿ ವ್ಯಾಸಂಗ ಮಾಡುತ್ತಿರುವ 14 ವಿದ್ಯಾರ್ಥಿಗಳಿಗೆ ಈಗ ಕೋವಿಡ್ ದೃಢಪಟ್ಟಿದೆ.