ಕರ್ನಾಟಕ

karnataka

ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ಇಳಿಕೆ: 14,146 ಹೊಸ ಕೇಸ್​ ಪತ್ತೆ

By

Published : Oct 17, 2021, 11:00 AM IST

ದೇಶದಲ್ಲಿ ಕೋವಿಡ್​-19 ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ14,146 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

Covid-19
Covid-19

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 14,146 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3,40,67,719 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 144 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 4,52,124 ಕ್ಕೆ ಏರಿಕೆಯಾಗಿದೆ. 1,95,846 ಸಕ್ರಿಯ ಪ್ರಕರಣಗಳಿದ್ದು, ಕಳೆದ 220 ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ದೇಶದಲ್ಲಿ ಲಸಿಕೆ ನೀಡುವ ಕಾರ್ಯ ಸಹ ಭರದಿಂದ ಸಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 41,20,772 ಮಂದಿ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ಈ ಮೂಲಕ ಒಟ್ಟು ಲಸಿಕೆ ಪಡೆದವರ ಸಂಖ್ಯೆ 97,65,89,540 ಕ್ಕೆ ಏರಿಕೆಯಾಗಿದೆ.

ನಿನ್ನೆ 11,00,123 ಮಂದಿಗೆ ಕೋವಿಡ್​ ಪರೀಕ್ಷೆ ಮಾಡಲಾಗಿದ್ದು, 19,788 ಸೋಂಕಿತರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 3,34,19,749 ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ 98.10%ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ABOUT THE AUTHOR

...view details