ಮಿಡ್ನಾಪುರ( ಪಶ್ಚಿಮ ಬಂಗಾಳ):ಪೂರ್ವ ಮಿಡ್ನಾಪುರ ಜಿಲ್ಲೆಯ ಕಾಂಟೈನಲ್ಲಿ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಸುಮಾರು 15 ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೂರ್ವ ಮಿಡ್ನಾಪುರದ ಕಾಂಟೈ -3 ಬ್ಲಾಕ್ ಪ್ರದೇಶದ ಭಜಾ ಚೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಬಿಜೆಪಿಯ ಕಾಂಟೈ ಅಧ್ಯಕ್ಷ ಅನುಪ್ ಚಕ್ರವರ್ತಿ ಹೇಳಿದ್ದಾರೆ. ಧ್ವಜಾರೋಹಣ ಮಾಡುವಾಗ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.