ಕರ್ನಾಟಕ

karnataka

ETV Bharat / bharat

"ಈಸ್ ಆಫ್ ಡೂಯಿಂಗ್ ಬಿಸಿನೆಸ್"ನ ಸುಧಾರಣಾ ಪ್ರಕ್ರಿಯೆ ಪೂರ್ಣಗೊಳಿಸಿದ ರಾಜ್ಯಗಳಿವು!

ವ್ಯಾಪಾರ ಮಾಡಲು ಸುಲಭವಾಗುವ ಸುಧಾರಣೆಗಳನ್ನು ಪೂರ್ಣಗೊಳಿಸಿದ 15 ರಾಜ್ಯಗಳಿಗೆ 38,088 ಕೋಟಿ ರೂ.ಗಳ ಹೆಚ್ಚುವರಿ ಸಾಲದ ಅನುಮತಿ ನೀಡಲಾಗಿದೆ.

By

Published : Feb 17, 2021, 5:20 PM IST

money
money

ನವದೆಹಲಿ: ಗುಜರಾತ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್​​ ರಾಜ್ಯಗಳು "ಈಸ್ ಆಫ್ ಡೂಯಿಂಗ್ ಬಿಸಿನೆಸ್"ನ ಸುಧಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ. ಹೀಗಾಗಿ ಸುಧಾರಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸುವ ರಾಜ್ಯಗಳ ಸಂಖ್ಯೆ 15ಕ್ಕೇರಿದೆ.

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜಿಸುವ ಇಲಾಖೆಯು (ಡಿಪಿಐಐಟಿ) ಶಿಫಾರಸು ಸ್ವೀಕರಿಸಿದ ನಂತರ ಮುಕ್ತ ಮಾರುಕಟ್ಟೆ ಸಾಲಗಳ ಮೂಲಕ 9,905 ಕೋಟಿ ರೂ.ಗಳ ಹೆಚ್ಚುವರಿ ಹಣಕಾಸು ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುಮತಿ ನೀಡಿದೆ.

ಈ ಹಿಂದೆ ಆಂಧ್ರ ಪ್ರದೇಶ, ಅಸ್ಸೋಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಮತ್ತು ತೆಲಂಗಾಣ ರಾಜ್ಯಗಳು ಈ ಸುಧಾರಣೆಯನ್ನು ಪೂರ್ಣಗೊಳಿಸಿದ್ದು, ಇದನ್ನು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜಿಸುವ ಇಲಾಖೆಯು (ಡಿಪಿಐಐಟಿ) ದೃಢಪಡಿಸಿದೆ.

ವ್ಯಾಪಾರ ಮಾಡಲು ಸುಲಭವಾಗುವ ಸುಧಾರಣೆಗಳನ್ನು ಪೂರ್ಣಗೊಳಿಸಿದ ನಂತರ ಈ 15 ರಾಜ್ಯಗಳಿಗೆ 38,088 ಕೋಟಿ ರೂ.ಗಳ ಹೆಚ್ಚುವರಿ ಸಾಲದ ಅನುಮತಿ ನೀಡಲಾಗಿದೆ.

ABOUT THE AUTHOR

...view details