ಬೇತಿಯಾ, ಬಿಹಾರ:ವಿಷಕಾರಿ ಮದ್ಯಸೇವನೆ ಮಾಡಿದ ಆರೋಪದಲ್ಲಿ, ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ ಸಾವಿನ ಪ್ರಮಾಣ ಹೆಚ್ಚಳವಾಗಿದ್ದು, ಒಟ್ಟು ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಿಹಾರ ಪಶ್ಚಿಮ ಚಂಪಾರಣ್ ಜಿಲ್ಲೆಯ ಲೌರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಕುರಿತು ಪಶ್ಚಿಮ ಚಂಪಾರಣ್ನ ಜಿಲ್ಲಾ ಸಾರ್ವಜನಿಕರ ಸಂಪರ್ಕಾಧಿಕಾರಿ ಕಚೇರಿಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಲೌರಿಯಾದ ಜನತೆ ಮಾಧ್ಯಮಗಳೊಂದಿಗೆ ಮಾತನಾಡಿ ವಿಷಕಾರಿ ಮದ್ಯವೇ ಜನರ ಸಾವಿಗೆ ಕಾರಣವಾಗಿದೆ ಎಂದಿದ್ದಾರೆ. ಲೌರಿಯಾದಲ್ಲಿ ಮಾರಾಟ ಮಾಡಲಾಗುತ್ತಿದ್ದ ವಿಷಕಾರಿ ಮದ್ಯದಿಂದಲೇ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಥಳೀಯ ನಿವಾಸಿಯಾದ ಭೋಲಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾನೆ.