ಮುಂಬೈ(ಮಹಾರಾಷ್ಟ್ರ):ಕಮಿಷನ್ ಆಸೆಗೆ 16 ಕೆಜಿ ತೂಕದ 80 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಸಾಗಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬಂಧಿಸಿದೆ.
ಬಿನು ಜಾನ್ ಬಂಧಿತ ಆರೋಪಿ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಲಗೇಜ್ ಟ್ರಾಲಿಯಲ್ಲಿ ರಹಸ್ಯವಾಗಿ ಅಡಗಿಸಿಟ್ಟ ಡ್ರಗ್ಸ್ ಪತ್ತೆಯಾಗಿದೆ. ಉತ್ತಮ ಗುಣಮಟ್ಟದ 16 ಕೆಜಿ ಹೆರಾಯಿನ್ ಇದಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 80 ಕೋಟಿ ರೂಪಾಯಿ ಮೌಲ್ಯವುಳ್ಳದ್ದು ಎಂದು ಅಂದಾಜಿಸಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.