ನವದೆಹಲಿ: ದೇಶದ ಐಐಟಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ), ಎನ್‌ಐಟಿ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಮತ್ತು ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್)ಗಳಂತಹ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿದೆ. 2022ರ ಒಂದೇ ವರ್ಷದಲ್ಲಿ 16 ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದಾರೆ. ಈ ಬಗ್ಗೆ ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಸ್ ಸರ್ಕಾರ್ ರಾಜ್ಯಸಭೆಯಲ್ಲಿ ಲಿಖಿತ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಗುವಾಹಟಿ ಐಐಟಿಯಲ್ಲಿ ಮತ್ತೋರ್ವ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ
2019ರಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರದ ಎರಡು ವರ್ಷಗಳಲ್ಲಿ ಕಡಿಮೆಯಾಗಿದ್ದವು. 2020ರಲ್ಲಿ ಐದು ಮತ್ತು 2021ರಲ್ಲಿ ಏಳು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು. ಇದೀಗ ಮತ್ತೆ ಈ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 2022ನೇ ಸಾಲಿನಲ್ಲಿ ಒಟ್ಟು 16 ಜನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಐಐಟಿಯಲ್ಲಿ ಎಂಟು ಮಂದಿ, ಎನ್ಐಟಿಯಲ್ಲಿ ಏಳು ಜನ ಮತ್ತು ಐಐಎಂನಲ್ಲಿ ಒಬ್ಬ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾರೆ ಎಂಬುವುದು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ಬಾಂಬೆ ಐಐಟಿ ಕಾಲೇಜು ವಿದ್ಯಾರ್ಥಿ
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅನಿಯಮಿತ ತರಗತಿಗಳು ಸಂಖ್ಯೆಯಲ್ಲಿ ಈ ಇಳಿಕೆಗೆ ಕಾರಣವಾಗಿರಬಹುದು. ಏಕೆಂದರೆ, ವಿದ್ಯಾರ್ಥಿಗಳು ಮನೆಯಲ್ಲೇ ಹೆಚ್ಚಿನ ಸಮಯ ಕಳೆದಿದ್ದರು. ಅದೇನೇ ಇದ್ದರೂ, ಈ ಪ್ರಮುಖ ಸಂಸ್ಥೆಗಳಲ್ಲಿ ಆತ್ಮಹತ್ಯೆಗಳ ಸಂಖ್ಯೆಯಲ್ಲಿನ ಹೆಚ್ಚಳವು ಕಳವಳಕ್ಕೆ ಕಾರಣವಾಗಿದೆ. ಶೈಕ್ಷಣಿಕ ಒತ್ತಡ, ಕೌಟುಂಬಿಕ ಸಮಸ್ಯೆ, ವೈಯಕ್ತಿಕ ಕಾರಣ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಇದಕ್ಕೆ ಕಾರಣಕ್ಕೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ಸುಭಾಷ್ ಸರ್ಕಾರ್ ಉಲ್ಲೇಖಿಸಿದ್ದಾರೆ.