ಜೈಪುರ (ರಾಜಸ್ಥಾನ): ಒಂಭತ್ತು ವರ್ಷದ ಬಾಲಕಿಯೊಬ್ಬಳನ್ನು ನಂಬಿಸಿ ಕರೆದುಕೊಂಡು ಹೋಗಿ ನಂತರ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ 17 ವರ್ಷದ ಬಾಲಕನನ್ನು ರಾಜಸ್ಥಾನದ ಜೈಪುರ ಪೊಲೀಸರು ಬಂಧಿಸಿದ್ದಾರೆ.
ಜೈಪುರದ ಅಮೇರ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕತ್ತು ಸೀಳಿ ಕೊಲೆ ಮಾಡಿದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಪೋಷಕರು ಪೊಲೀಸ್ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಏಳು ಗಂಟೆಯೊಳಗೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.