ಕೊಯಮತ್ತೂರು(ತಮಿಳುನಾಡು) :12ನೇ ತರಗತಿಯಲ್ಲಿ(17 year old girl dies) ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಕಾಲೇಜ್ ಶಿಕ್ಷಕನ ವಿರುದ್ಧ ಲೈಂಗಿಕ(sexual assault by teacher) ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದೆ.
ಯಾರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಆಕೆಯ ಪೋಷಕರು ಮತ್ತು ಸ್ನೇಹಿತರು ಶಾಲಾ ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪದೇಪದೆ ಶಿಕ್ಷಕನ ಲೈಂಗಿಕ(sexually assault) ಕಿರುಕುಳದಿಂದಾಗಿ ಆಕೆ ಒತ್ತಡಕ್ಕೊಳಗಾಗಿದ್ದಳು. ಅದೇ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಆರೋಪ ಮಾಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ಸೊಸೈಡ್ ನೋಟ್ ಬರೆದಿಟ್ಟಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.