ಮುಜಾಫರ್ನಗರ(ಉತ್ತರ ಪ್ರದೇಶ): ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ದುಷ್ಕೃತ್ಯಗಳು ನಿಲ್ಲುತ್ತಿಲ್ಲ. ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಮತ್ತೊಂದು ಹೇಯಕೃತ್ಯ ವರದಿಯಾಗಿದೆ.
ಇಲ್ಲಿ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಭೋಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಭಾನುವಾರ ಘಟನೆ ನಡೆದಿದೆ. ಪೊಲೀಸರು ಆರೋಪಿಗಳಾದ ಶುಭಂ ಹಾಗೂ ಆಶಿಶ್ ಎಂಬವರ ಮೇಲೆ ಎಫ್‌ಐಆರ್ ದಾಖಲಿಸಿದ್ದು ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಬಾಬು ತಿಳಿಸಿದ್ದಾರೆ.
ಇದನ್ನೂ ಓದಿ:ಪಾಕ್‌ನ ಉನ್ನತಾಧಿಕಾರ ಹಿಡಿಯುವ CSS ಪರೀಕ್ಷೆ ಪಾಸ್ ಮಾಡಿದ ಹಿಂದೂ ಯುವತಿ: 73 ವರ್ಷಗಳ ನಂತರದ ಸಾಧನೆ