ತಿರುವನಂತಪುರಂ(ಕೇರಳ): ವಿಚಿತ್ರವಾದ ಘಟನೆವೊಂದರಲ್ಲಿ 17 ವರ್ಷದ ಶಾಲಾ ಬಾಲಕಿಯೋರ್ವಳು ಯೂಟ್ಯೂಬ್ ಮೂಲಕ ಮಾಹಿತಿ ಪಡೆದುಕೊಂಡು, ಹೆರಿಗೆ ಮಾಡಿಕೊಳ್ಳುವ ಮೂಲಕ ಮಗುವಿಗೆ ಜನ್ಮ ನೀಡಿದ್ದಾಳೆ. ಕಳೆದ ಅಕ್ಟೋಬರ್ 20ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ 17 ವರ್ಷದ ಬಾಲಕಿ ಜೊತೆ 22 ವರ್ಷದ ಯುವಕನೋರ್ವ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಳು. ಕಳೆದ ಅಕ್ಟೋಬರ್ 20ರಂದು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಸೋಂಕು ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿರಿ:CDR ಅಳಿಸಲು ಎಥಿಕಲ್ ಹ್ಯಾಕರ್ಗೆ ₹5 ಲಕ್ಷ ನೀಡಲು ಮುಂದಾಗಿದ್ದ ಶಾರೂಖ್ ಖಾನ್ ಮ್ಯಾನೇಜರ್ ಪೂಜಾ ದದ್ಲಾನಿ
ಘಟನೆಯ ಸಂಪೂರ್ಣ ವಿವರ
ಶಾಲಾ ಬಾಲಕಿ ಹಾಗೂ ಯುವಕನ ಮದುವೆ ಮಾಡಲು ಎರಡು ಕುಟುಂಬದ ಸದಸ್ಯರು ಒಪ್ಪಿಗೆ ಸೂಚಿಸಿದ್ದರು. ಆದರೆ ಬಾಲಕಿಗೆ ವಯಸ್ಸು ಕಡಿಮೆ ಇದ್ದ ಕಾರಣ ಮತ್ತಷ್ಟು ದಿನ ಕಾಯುವಂತೆ ತಿಳಿಸಲಾಗಿತ್ತು. ಇದರ ಮಧ್ಯೆ ಆಕೆ ಗರ್ಭಿಣಿಯಾಗಿದ್ದಾಳೆ. ಹೀಗಾಗಿ ಯೂಟ್ಯೂಬ್ನಲ್ಲಿ ವಿಡಿಯೋ ನೋಡಿಕೊಂಡು ಅದರಂತೆ ಮಗುವಿಗೆ ಜನ್ಮ ನೀಡಿದ್ದಾಳೆಂದು ತಿಳಿದು ಬಂದಿದೆ. ಸೋಂಕು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಪ್ರಕಾರ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಎರಡು ಕುಟುಂಬಕ್ಕೂ ಮಾಹಿತಿ ಗೊತ್ತಿರಲಿಲ್ಲ ಎನ್ನಲಾಗಿದೆ.
ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಯ ಬಂಧನ ಮಾಡುವಲ್ಲಿ ಈಗಾಗಲೇ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.