ಕರ್ನಾಟಕ

karnataka

ETV Bharat / bharat

Delhi Covid: ಕೇವಲ 12 ದಿನದಲ್ಲಿ ದೆಹಲಿಯ 1,700 ಪೊಲೀಸರಿಗೆ ಸೋಂಕು! - ದೆಹಲಿಯಲ್ಲಿ ಕೋವಿಡ್ ಸೋಂಕಿತರು

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕೇವಲ 12 ದಿನಗಳಲ್ಲಿ ಸುಮಾರು 1700 ಪೊಲೀಸರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

1,700 Delhi Police personnel test positive for COVID-19
Delhi Covid: ಕೇವಲ 12 ದಿನದಲ್ಲಿ ದೆಹಲಿಯ 1,700 ಪೊಲೀಸರಿಗೆ ಸೋಂಕು

By

Published : Jan 12, 2022, 11:57 AM IST

ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇವಲ 12 ದಿನದಲ್ಲಿ ದೆಹಲಿಯ ಸುಮಾರು 1,700 ಪೊಲೀಸ್​​ ಸಿಬ್ಬಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನವರಿ 1 ಮತ್ತು ಜನವರಿ 12ರ ನಡುವೆ ದೆಹಲಿ ಪೊಲೀಸರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಮವಾರವಷ್ಟೇ ಒಂದು ಸಾವಿರ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದು, ಈಗ 700 ಮಂದಿ ಸೋಂಕಿತರು ಹೆಚ್ಚಾಗಿದ್ದಾರೆ.

ಕೋವಿಡ್ ಕಾರಣದಿಂದ ದೆಹಲಿಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​​ಗಳ ಮೂಲಕ ಸಭೆಗಳನ್ನು ನಡೆಸುತ್ತಿದ್ದಾರೆ. ಕೋವಿಡ್ ಕಾಣಿಸಿಕೊಂಡ ಎಲ್ಲರಿಗೂ ಮನೆಯಲ್ಲಿಯೇ ಐಸೋಲೇಟ್ ಆಗಲು ಸೂಚನೆ ನೀಡಲಾಗಿದೆ.​ ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪೊಲೀಸರಿಗಾಗಿ ಪ್ರತ್ಯೇಕ ಹೆಲ್ತ್ ಡೆಸ್ಕ್ ಅನ್ನು ಸ್ಥಾಪಿಸಲಾಗಿದೆ.

ದೆಹಲಿಯಲ್ಲಿ ಕೊರೊನಾ:ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 21,259 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಸೋಂಕಿತರ ಪ್ರಮಾಣ ಶೇಕಡಾ 25.65ರಷ್ಟಿದೆ ಎಂದು ದೆಹಲಿ ಕೇಂದ್ರಾಡಳಿತ ಪ್ರದೇಶದ ಹೆಲ್ತ್​ ಬುಲೆಟಿನ್​​ನಲ್ಲಿ ಮಾಹಿತಿ ನೀಡಲಾಗಿದೆ.

ದೆಹಲಿಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 74,881ಕ್ಕೆ ಏರಿಕೆಯಾಗಿದ್ದು, ಕಳೆದ ಎಂಟು ತಿಂಗಳಲ್ಲೇ ಅತ್ಯಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 23 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 25,200ಕ್ಕೆ ತಲುಪಿದೆ.

ಇದನ್ನೂ ಓದಿ:India Covid: ದೇಶದಲ್ಲಿ ಹೊಸದಾಗಿ 1.94 ಲಕ್ಷ ಮಂದಿಗೆ ಕೋವಿಡ್​.. 24 ಗಂಟೆಯಲ್ಲಿ 442 ಮಂದಿ ಸಾವು

ABOUT THE AUTHOR

...view details