ತಿರುವನಂತಪುರಂ (ಕೇರಳ): ದೇಶದಲ್ಲಿ ನಿತ್ಯ ವರದಿಯಾಗುತ್ತಿರುವ ಹೊಸ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಪೈಕಿ ಕೇರಳ ರಾಜ್ಯದ್ದೇ ಸಿಂಹಪಾಲಿರುತ್ತದೆ. ಒಂದೆಡೆ ಶಾಲಾ-ಕಾಲೇಜುಗಳು ಪುನಾರಂಭವಾಗಿದ್ದು, ಮತ್ತೊಂದೆಡೆ ಒಮಿಕ್ರಾನ್ ರೂಪಾಂತರಿಯ ಭೀತಿ ಎದುರಾಗಿದೆ. ಹೀಗಿರುವಾಗ ರಾಜ್ಯದಲ್ಲಿ 1,707 ಮಂದಿ ಬೋಧಕ-ಬೋಧಕೇತರ ಸಿಬ್ಬಂದಿ ಇನ್ನೂ ಕೂಡ ಸಂಪೂರ್ಣವಾಗಿ ಕೊರೊನಾ ಲಸಿಕೆ ಪಡೆದಿಲ್ಲ.
ಹೀಗಾಗಿ ಇವರ ವಿರುದ್ಧ ಕೇರಳ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದೆ. ಎರಡೂ ಡೋಸ್ ಪಡೆಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಪಟ್ಟಿಯನ್ನು ಶಿಕ್ಷಣ ಸಚಿವ ವಿ ಶಿವನ್ಕುಟ್ಟಿ ಇಂದು ಬಿಡುಗಡೆ ಮಾಡಿದ್ದಾರೆ.