ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಜಮ್ಮು ರೈಲು ನಿಲ್ದಾಣದ ಟ್ಯಾಕ್ಸಿ ನಿಲ್ದಾಣದ ಬಳಿ ಗುರುವಾರ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಇದರಲ್ಲಿದ್ದ 18 ಡಿಟೋನೇಟರ್ಗಳು ಸೇರಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅನುಮಾನಾಸ್ಪದ ಬ್ಯಾಗ್ ಕುರಿತ ಮಾಹಿತಿ ಸಿಕ್ಕ ಕೂಡಲೇ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಸದ್ಯ ಬ್ಯಾಗ್ ವಶಪಡಿಸಿಕೊಂಡಿದ್ದೇವೆ. ಬ್ಯಾಗ್ನಲ್ಲಿ 2 ಬಾಕ್ಸ್ಗಳಲ್ಲಿ ಪ್ಯಾಕ್ ಮಾಡಲಾದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿಆರ್ಪಿ ಆರಿಫ್ ರಿಶು ತಿಳಿಸಿದ್ದಾರೆ.