ಕೊಚ್ಚಿ(ಕೇರಳ) :ಪರವಾನಿಗೆ ಇಲ್ಲದೆ ಅಕ್ರಮವಾಗಿ ಬಂದೂಕು ಸಾಗಾಣಿಕೆ ಮಾಡ್ತಿದ್ದ 18 ಜನರ ಬಂಧನ ಮಾಡುವಲ್ಲಿ ಕೇರಳದ ಕಲಮಸ್ಸೆರಿ ಪೊಲೀಸ್ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಲ್ಲ ಆರೋಪಿಗಳನ್ನ ನಾಳೆ ಕೋರ್ಟ್ಗೆ ಹಾಜರುಪಡಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳು ಖಾಸಗಿ ಸೆಕ್ಯುರಿಟಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರಿಂದ 19 ಬಂದೂಕು ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕೂಡ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.