ಕೋಲ್ಕತ್ತಾ:294 ಕ್ಷೇತ್ರಗಳ ಪೈಕಿ ಪಶ್ಚಿಮ ಬಂಗಾಳದಲ್ಲಿ ನಡೆದ 30 ಸ್ಥಾನಗಳ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಶೇ.82ರಷ್ಟು ವೋಟಿಂಗ್ ಆಗಿದೆ.
ದೀದಿ ನಾಡಲ್ಲಿ ಈ ಸಲದ ವಿಧಾನಸಭೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಣವಾಗಿದ್ದು, ಪಶ್ಚಿಮ ಬಂಗಾಳದ 30 ಕ್ಷೇತ್ರಗಳಲ್ಲಿ 91 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, 73 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಿದ್ದು, ಪ್ರಮುಖವಾಗಿ ಪಶ್ಚಿಮ ಬಂಗಾಳದ ಮಿಡ್ನಾಪೂರ್, ಬಂಕಾಪೂರ್, ಪುರಿಲಿಯಾ ಕ್ಷೇತ್ರ ಸೇರಿ ವಿವಿಧ ಜಿಲ್ಲೆಗಳಲ್ಲಿ ವೋಟಿಂಗ್ ಆಗಿದೆ.