ಕರ್ನಾಟಕ

karnataka

ETV Bharat / bharat

ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ, 15 ಮಂದಿಗೆ ಗಾಯ

ಗುಜರಾತ್​ನ ಪಂಚಮಹಲ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟದಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

By

Published : Dec 16, 2021, 3:59 PM IST

fire at chemical factory
ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಪಂಚಮಹಲ್ (ಗುಜರಾತ್​): ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟವು ಅಗ್ನಿ ಅವಘಡಕ್ಕೆ ಎಡೆಮಾಡಿಕೊಟ್ಟಿದ್ದು, ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್​ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದಿದೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಪಂಚಮಹಲ್ ಜಿಲ್ಲೆಯ ರಂಜಿತ್‌ನಗರದಲ್ಲಿರುವ ಗುಜರಾತ್ ಫ್ಲೋರೊಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್)ನ ಘಟಕದಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ 15 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರೇಯಸಿಗೆ ಗಿಫ್ಟ್​​ ನೀಡಲು ಚಿನ್ನದ ಉಂಗುರ ಕದ್ದ ಪ್ರೇಮಿ.. ಸಿಸಿಟಿವಿಯಲ್ಲಿ ಭಾವಿ ವೈದ್ಯನ ಕೈಚಳಕ ಸೆರೆ

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಫೋಟಕ್ಕೆ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ABOUT THE AUTHOR

...view details