ಉಜ್ಜಯಿನಿ:ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್‌ನಲ್ಲಿನ ಗ್ಯಾಸ್ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.
ಮೃತರನ್ನು ರಾಜೇಂದ್ರ ಸಿಂಗ್ (30) ಮತ್ತು ಲಖನ್ ಸಿಂಗ್ (27) ಎಂದು ಗುರುತಿಸಲಾಗಿದ್ದು, ಪೊಲೀಸ್ ಉಪ ವಿಭಾಗಾಧಿಕಾರಿ (ಎಸ್‌ಡಿಒಪಿ) ಆರ್.ಕೆ. ರಾಯ್ ಘಟನೆ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖಾ ವರದಿಯ ಪ್ರಕಾರ, ಇಬ್ಬರು ಸ್ವಚ್ಛತಾ ಕಾರ್ಮಿಕರು ಗ್ಯಾಸ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವಾಗ, ಆಕಸ್ಮಿಕವಾಗಿ ಟ್ಯಾಂಕ್ನೊಳಗೆ ಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿದು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗ್ಯಾಸ್ ಟ್ಯಾಂಕ್ ಖಾಲಿ ಮಾಡಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:UNHRC: ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ಭಾರತ ಮರು ಆಯ್ಕೆ