ತಪಿ (ಗುಜರಾತ್):ಗುಜರಾತ್ ರಾಜ್ಯದಾದ್ಯಂತ ಬಾರಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನಿನ್ನೆ ಉಕೈ ಡ್ಯಾಂನಿಂದ ತಾಪಿ ಜಿಲ್ಲೆಯ ತಾಪಿ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಉಕೈ ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಮುಂದಿನ ಎರಡು ದಿನಗಳಲ್ಲಿ ಗುಜರಾತ್‌ನಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಹೆಚ್ಚು ಮಳೆ ಸುರಿಯವ ಸಾಧ್ಯತೆಗಳಿವೆ.