ಪುಲ್ವಾಮಾ(ಜಮ್ಮು ಕಾಶ್ಮೀರ್): ಮಧ್ಯರಾತ್ರಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸೇರಿದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಯ ಸೈನಿಕರು ಬೇಟೆಯಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪುಚಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಐವರು ಉಗ್ರರ ಹುಟ್ಟಡಗಿಸಿದ ಸೇನೆ - 2 LeT terrorists killed in encounter
ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸಂಬಂಧಿಸಿದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸದೆಬಡಿದಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಪುಲ್ವಾಮಾದಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ
ನಿಷೇಧಿತ ಭಯೋತ್ಪಾದಕ ಸಂಘಟನೆಯ ಐದು ಭಯೋತ್ಪಾದಕರನ್ನು ಕುಲ್ಗಮ್ ಪೊಲೀಸ್ ಮತ್ತು 1 ಆರ್ಆರ್ ಜಂಟಿ ಕಾರ್ಯಾಚರಣೆಯಲ್ಲಿ ಸದೆಬಡಿಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪುಚಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಹಿಂದೆ ಮಾಹಿತಿ ನೀಡಿದ್ದರು. ಹಾಗೆ ಇನ್ನೂ ಕೂಡ ಪೊಲೀಸರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಕಾಶ್ಮೀರ್ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Last Updated : Jul 8, 2021, 6:40 AM IST
TAGGED:
ಪುಲ್ವಾಮಾ