ಕರ್ನಾಟಕ

karnataka

ETV Bharat / bharat

ಕಾಶ್ಮೀರದಲ್ಲಿ ಮತ್ತೆ ಎನ್​ಕೌಂಟರ್ ಸದ್ದು​: ಇಬ್ಬರು ಉಗ್ರರು ಹತ - Jammu Kashmir Terrorist attack

ಉನ್ನತ ಭಯೋತ್ಪಾದಕ ಕಮಾಂಡರ್ ತನ್ನ ಸಹವರ್ತಿಯೊಂದಿಗೆ ವಾರ್ಪೋರಾ ಗ್ರಾಮದ ಮನೆಯೊಂದರಲ್ಲಿ ಅಡಗಿಕೊಂಡಿದ್ದನು. ಈ ಸಂದರ್ಭ ಖಚಿತ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡು, ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.

militants killed
ಜಮ್ಮು-ಕಾಶ್ಮೀರ

By

Published : Jul 23, 2021, 7:09 AM IST

Updated : Jul 23, 2021, 7:18 AM IST

ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ವಾರ್ಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಉನ್ನತ ಭಯೋತ್ಪಾದಕ ಕಮಾಂಡರ್(ಹೆಸರನ್ನು ಬಹಿರಂಗಪಡಿಸಲಿಲ್ಲ) ತನ್ನ ಸಹವರ್ತಿಯೊಂದಿಗೆ ವಾರ್ಪೋರಾ ಗ್ರಾಮದ ಮನೆಯೊಂದರಲ್ಲಿ ಅಡಗಿಕೊಂಡಿದ್ದನು. ಈ ಸಂದರ್ಭ ಖಚಿತ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡಿದೆ. ಬಳಿಕ ಎನ್‌ಕೌಂಟರ್‌ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ ಪೊಲೀಸರು, "ಸೊಪೋರ್‌ನ ವಾರ್‌ಪೊರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದು ತಿಳಿಸಿದೆ.

Last Updated : Jul 23, 2021, 7:18 AM IST

ABOUT THE AUTHOR

...view details