ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಸೈನಿಕರು ಮತ್ತು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಹತ್ಯೆಯಾದ ಉಗ್ರರ ಗುರುತು ಮತ್ತು ಯಾವ ಗುಂಪಿಗೆ ಸೇರಿದ್ದಾರೆ ಎಂದು ಕಂಡು ಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.