ಶ್ರೀನಗರ: ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯ ಬೆಮಿನಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಶ್ರೀನಗರದಲ್ಲಿ ಎನ್‌ಕೌಂಟರ್: ಎಲ್ಇಟಿಯ ಇಬ್ಬರು ಉಗ್ರರ ಹತ್ಯೆ - ಎಲ್ಇಟಿಯ ಇಬ್ಬರು ಉಗ್ರರ ಹತ್ಯೆ
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಶ್ರೀನಗರ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ
ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ದೊರೆತ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ - ವಿರೋಧಿ ಸರಣಿ ಕಾರ್ಯಾಚರಣೆ ನಡೆಯುತ್ತಿದೆ. ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳನ್ನು ಹೊಡೆದುರುಳಿಸಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.
ಇದನ್ನೂ ಓದಿ:ಕಾಳಿಯಮ್ಮನ ಉತ್ಸವದ ವೇಳೆ ಮುರಿದು ಬಿದ್ದ ರಥ; ಮೂವರು ಸಾವು