ಶಿವಪುರಿ(ಮಧ್ಯಪ್ರದೇಶ): ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ ಸುಲಾರ್ ನದಿಯ ಕಾಲುವೆಯ ಬಳಿಯ ಗಣಿಯಲ್ಲಿ ಈ ಘಟನೆ ನಡೆದಿದೆ ಎಂದು ಬಾಮೋರ್ ಕಾಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಲ್ಲಿದ್ದಲು ಗಣಿಯಲ್ಲಿ ಮಣ್ಣು ಕುಸಿದು, ಇಬ್ಬರು ಮಹಿಳೆಯರ ದುರ್ಮರಣ - ಶಿವಪುರಿ ಜಿಲ್ಲೆಯಲ್ಲಿ ಗಣಿ ದುರಂತ
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಗಣಿಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ದುರ್ಘಟನೆ ಜರುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಲ್ಲಿದ್ದಲು ಗಣಿಯಲ್ಲಿ ಮಣ್ಣು ಕುಸಿದು, ಇಬ್ಬರು ಮಹಿಳೆಯರು ದುರ್ಮರಣ
ಗುಹೆಯ ಆಕಾರದಲ್ಲಿದ್ದ ಗಣಿಯಲ್ಲಿ ಆಳಕ್ಕೆ ತೆರಳಿದ್ದ ವೇಳೆಯಲ್ಲಿ ಮಣ್ಣು ಕುಸಿದು ಈ ಘಟನೆ ನಡೆದಿದೆ. ಜೊತೆಗೆ ತೆರಳಿದ್ದವರು ಈ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಒಂದು ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಮತ್ತೊಬ್ಬ ಮಹಿಳೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಇದನ್ನೂ ಓದಿ:‘ಅಣ್ಣ.. ಪ್ಲೀಸ್ ನನ್ನನ್ನು ಕಾಪಾಡು’... ಸೆಕ್ಸ್ ರಾಕೆಟ್ಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ಪೊಲೀಸರು!