ಹೈದರಾಬಾದ್:ಉಕ್ರೇನ್ನಲ್ಲಿ ಯುದ್ಧ ಆರಂಭವಾದ ನಂತರ ವಾಪಸ್ ಬಂದಿದ್ದ ಭಾರತದ 2000 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ತನ್ನ ದೇಶದ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ನೀಡಲು ಉಜ್ಬೆಕಿಸ್ತಾನ್ ಮುಂದೆ ಬಂದಿದೆ. ಉಕ್ರೇನ್‌ನಿಂದ ಹಿಂದಿರುಗಿದ ನಂತರ, ತಮ್ಮ ಶೈಕ್ಷಣಿಕ ವರ್ಷವನ್ನು ಕಳೆದುಕೊಂಡಿರುವ ಭಾರತದ ಸಾವಿರಾರು ಎಂಬಿಬಿಎಸ್ ವಿದ್ಯಾರ್ಥಿಗಳು ವಿವಿಧ ದೇಶಗಳ ವಿಶ್ವವಿದ್ಯಾಲಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ಹೆಣಗಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಲ ದೇಶಗಳು ಈ ವಿದ್ಯಾರ್ಥಿಗಳನ್ನು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಸೇರಿಸಿಕೊಳ್ಳಲು ಮುಂದಾಗುತ್ತಿವೆ. ಕೇಂದ್ರ ಸರ್ಕಾರ ಈಗಾಗಲೇ ವಿವಿಧ ದೇಶಗಳಲ್ಲಿ ಶಿಕ್ಷಣ ಮುಂದುವರಿಸಲು ಅನುಮತಿ ನೀಡಿದೆ. ಇತ್ತೀಚೆಗೆ, ಉಜ್ಬೇಕಿಸ್ತಾನ್ ಭಾರತದೊಂದಿಗೆ ಸಹಿ ಮಾಡಿದ ಒಪ್ಪಂದದ ಭಾಗವಾಗಿ ತನ್ನ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದೆ.
ಭಾರತದಲ್ಲಿ ಉಜ್ಬೇಕಿಸ್ತಾನದ ರಾಯಭಾರಿ ದಿಲ್ಶೋದ್ ಅಖಾಟೋವ್ ಅವರು ಗುರುವಾರ ಅಧಿಕೃತವಾಗಿ ಈ ವಿಷಯದ ಘೋಷಣೆ ಮಾಡಿದರು. ಅಗತ್ಯವಿದ್ದರೆ ಇನ್ನೂ ಕೆಲವರನ್ನು ಸೇರಿಸಿಕೊಳ್ಳುವುದಾಗಿ ಭರವಸೆ ನೀಡಿದರು. ಹೈದರಾಬಾದ್‌ನ ಬೇಗಂಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಕೂಡ ನೀಡಲಾಯಿತು.