ಕರ್ನಾಟಕ

karnataka

By

Published : Jul 15, 2022, 2:38 PM IST

ETV Bharat / bharat

ತೆಲಂಗಾಣ 20,000 ಜನರಿಗೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ

ರಾಜ್ಯದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದ್ದು, ಒಟ್ಟು 20,000 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

20,000 people shifted
ತೆಲಂಗಾಣ 20,000 ಜನರಿಗೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ

ಹೈದರಬಾದ್​: ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದ್ದು ಒಟ್ಟು 20,000 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭದ್ರಾದ್ರಿ ಮತ್ತು ಕೊತ್ತಗೂಡೆಮ್​ ಜಿಲ್ಲೆಯ ಕೆಲವು ಭಾಗಗಳು ಜಲಾವೃತ್ತಗೊಂಡಿವೆ.

ಒಟ್ಟು 19,071 ಜನರನ್ನು 223 ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿದು ಬಂದಿದೆ. ಇನ್ನೂ ನಿರ್ಮಲ ಜಿಲ್ಲೆಯ ಮಹಿಳೆಯೊಬ್ಬರು ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇನ್ನೂ ಗೋದಾವರಿ ನದಿ ತುಂಬಿ ಹರಿಯುತ್ತಿರುವುದರಿಂದ ಮುಳುಗು, ಭೂಪಾಲಪಲ್ಲಿ ಮತ್ತು ಭದ್ರಾದ್ರಿ - ಕೊತಗುಡೆಂ ಜಿಲ್ಲೆಗಳ ಮೇಲೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಸಾರಿಗೆ ಸಚಿವ ಪಿ ಅಜಯ್ ಕುಮಾರ್, ಗೋದಾವರಿಯಲ್ಲಿ ನೀರಿನ ಮಟ್ಟವು ಹೆಚ್ಚಾಗಿದ್ದು ಅಪಾಯದ ಮಟ್ಟ ತಲುಪಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಹೆಚ್ಚಿಸಲು ಹೆಚ್ಚುವರಿ ತುರ್ತು ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಪತ್ನಿಯಾದವಳು 'ತಾಳಿ' ತೆಗೆದಿಡುವುದು ಪತಿಗೆ ನೀಡುವ ಅತ್ಯುನ್ನತ ಮಾನಸಿಕ ಕ್ರೌರ್ಯ: ಮದ್ರಾಸ್ ಹೈಕೋರ್ಟ್

ABOUT THE AUTHOR

...view details