ಅಹಮದಾಬಾದ್ (ಗುಜರಾತ್):2002ರ ಗುಜರಾತ್ನ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹೆಚ್ಚುವರಿ ಡಿಜಿಪಿ ಆರ್.ಬಿ.ಶ್ರೀಕುಮಾರ್ ಅವರಿಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಸಮನ್ಸ್ ಜಾರಿ ಮಾಡಿದೆ.
2002ರ ಫೆಬ್ರವರಿ 28ರಂದು ಗೋಧ್ರಾ ರೈಲು ದಹನದ ಒಂದು ದಿನದ ಬಳಿಕ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಹಿಂಸಾಚಾರದ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿ 68 ಜನರ ಹತ್ಯೆಯಾಗಿತ್ತು.
ಈ ಪ್ರಕರಣದಲ್ಲಿ ಆಗ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಮತ್ತು ಇತರ 63 ಮಂದಿಗೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕ್ಲೀನ್ಚಿಟ್ ನೀಡಿತ್ತು. ಈ ಕ್ಲೀನ್ ಚಿಟ್ ನೀಡಿರುವುದನ್ನು ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.