ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡಲು 21.80 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣವನ್ನು ಈವರೆಗೆ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ನೀಡಲಾಗಿದ್ದು, ಇನ್ನೂ 1.90 ಕೋಟಿ ವ್ಯಾಕ್ಸಿನ್ಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
40,650 ಕೋವಿಡ್ ಲಸಿಕೆ ಪ್ರಮಾಣವು ಅಂತಿಮ ಹಂತದಲ್ಲಿದೆ ಮತ್ತು ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸ್ವೀಕರಿಸುತ್ತವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.