ಕರ್ನಾಟಕ

karnataka

ETV Bharat / bharat

ಕೇರಳದಲ್ಲಿ ಕೊರೊನಾ: ಇಂದು 2,133 ಮಂದಿಗೆ ಪಾಸಿಟಿವ್​, 13 ಸಾವು - ಕೇರಳ ಸುದ್ದಿ

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ 13 ಮಂದಿ ಬಲಿಯಾಗಿದ್ದಾರೆ.

2133-positive-13-killed-in-kerala-today
ಕೇರಳದಲ್ಲಿ ಕೊರೊನಾ ಸಂಖ್ಯೆ ಏರಿಕೆ

By

Published : Mar 11, 2021, 10:55 PM IST

ಕೇರಳ/ಪಂಜಾಬ್​:ಕೇರಳದಲ್ಲಿ ಇಂದು ಹೊಸದಾಗಿ 2,133 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು 33,785 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಅಲ್ಲದೆ ಇಂದು 3,753 ಮಂದಿ ಗುಣಮುಖರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಕೇರಳ ಸರ್ಕಾರ ಮಾಹಿತಿ ನೀಡಿದೆ.

ಇದಲ್ಲದೆ 13 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 4,355ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 10,47,226 ಮಂದಿ ಕೋವಿಡ್​​​​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಯಲ್ಲಿ 69,838 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ ಕೋಯಿಕೋಡ್​ನಲ್ಲಿ ಅತೀ ಹೆಚ್ಚು 261 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ:ಕೇರಳ ವಿಧಾನಸಭಾ ಚುನಾವಣೆ: ಎಲ್​ಡಿಎಫ್​ಗೆ ಸವಾಲಾದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ABOUT THE AUTHOR

...view details