ಅಹಮದಾಬಾದ್(ಗುಜರಾತ್):ರಾಜ್ಯದಬೋಟಾಡ್ ಜಿಲ್ಲೆಯ ರೋಜಿದ್ ಗ್ರಾಮ ಮತ್ತು ಧಂಧೂಕಾ, ಭಾವನಗರದಲ್ಲಿ ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿರುವವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಅಸ್ವಸ್ಥಗೊಂಡ47 ಮಂದಿಯನ್ನು ಈಗಾಗಲೇ ಭಾವನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಜರಾತ್ ಕಳ್ಳಭಟ್ಟಿ ದುರಂತ: ಸಾವಿಗೀಡಾದವರ ಸಂಖ್ಯೆ 28ಕ್ಕೇರಿಕೆ - ETV Bhart Kannada
ಗುಜರಾತ್ನಲ್ಲಿ ಕಳ್ಳಭಟ್ಟಿ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವವರ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ.
ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ಐಜಿ ಅಶೋಕ್ ಯಾದವ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಕಳ್ಳಭಟ್ಟಿ ಬಗ್ಗೆ ಸಾಕಷ್ಟು ವಿವಾದಗಳು ಏರ್ಪಟ್ಟಿದ್ದು, ರಾಜಕೀಯ ವಲಯದಲ್ಲಿಯೂ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಜುಲೈ 25ರಂದು ಬೋಟಾಡ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 19 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಂಗಳೂರು: ಪಬ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ, ಬಜರಂಗದಳ ತಡೆ
Last Updated : Jul 26, 2022, 1:16 PM IST