ನವದೆಹಲಿ: ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ 182 ಶಾಸಕರ ಪೈಕಿ ಶೇ.22ರಷ್ಟು ಎಂದರೆ 40 ಜನರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಇದರಲ್ಲಿ 29 ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಹೊಂದಿದ್ದಾರೆ ಎಂಬ ಅಂಶ ಹೊರಬಿದ್ದಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಸಂಸ್ಥೆ ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ವಿಶ್ಲೇಷಣೆ ನಡೆಸಿ, ಈ ಮಾಹಿತಿ ಹೊರ ಹಾಕಿದೆ. ಇದೀಗ ಒಟ್ಟು 40 ಜನ ವಿಜೇತ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ. ಇದರಲ್ಲಿ 26 ಜನ ಬಿಜೆಪಿಗೆ ಸೇರಿದ್ದಾರೆ. ಉಳಿದಂತೆ ಕಾಂಗ್ರೆಸ್ನ 9 ಜನ, ಆಮ್ ಆದ್ಮಿ ಪಕ್ಷದ ಇಬ್ಬರು ಮತ್ತು ಇಬ್ಬರು ಪಕ್ಷೇತರರು ಹಾಗೂ ಸಮಾಜವಾದಿ ಪಕ್ಷದ ಒಬ್ಬ ಶಾಸಕನ ವಿರುದ್ಧವೂ ಕ್ರಿಮಿನಲ್ ಕೇಸ್ ಇದೆ.