ಪಾಲಕ್ಕಾಡ್ (ಕೇರಳ): ಯುವಕನೋರ್ವ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಅಪ್ರಾಪ್ತೆಯನ್ನು ತನ್ನ ಮನೆಗೆ ಕರೆಸಿದ್ದಾನೆ. ಬಳಿಕ ಬಾಲಕಿಗೆ ಕೋಣೆಯಲ್ಲಿ ಬೆಂಕಿ ಹಚ್ಚಿ, ಆತನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎರ್ನಾಕುಲಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 16 ವರ್ಷದ ಬಾಲಕಿ ಮತ್ತು ಯುವಕ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಭಾನುವಾರ ಬೆಳಗ್ಗೆ 7 ಗಂಟೆಗೆ ಪಾಲಕ್ಕಾಡ್‌ನ ಕೊಲ್ಲಂಗೋಡ್‌ನಲ್ಲಿ ಈ ಘಟನೆ ನಡೆದಿದೆ. ಬಾಲಸುಬ್ರಮಣ್ಯಂ (23) ಎಂಬ ಯುವಕ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಬಾಲಕಿಯನ್ನು ಮನೆಗೆ ಕರೆಸಿಕೊಂಡಿದ್ದಾನೆ. ಘಟನೆಯ ವೇಳೆ ಮನೆಯಲ್ಲಿ ಅವನ ತಾಯಿ ಮತ್ತು ಕಿರಿಯ ಸಹೋದರ ಮಾತ್ರವೇ ಇದ್ದರು.